×
Ad

ಕೂಳೂರು ಮೇಲ್ಸೇತುವೆಯಿಂದ ವ್ಯಕ್ತಿಯೋರ್ವ ನದಿಗೆ ಹಾರಿರುವ ಶಂಕೆ: ಶೋಧ ಕಾರ್ಯ ಆರಂಭ

Update: 2020-11-03 12:24 IST

ಮಂಗಳೂರು, ನ.3: ಕೂಳೂರು ಮೇಲ್ಸೇತುವೆಯಿಂದ ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವ ನದಿಗೆ ಹಾರಿರುವ ಶಂಕೆಯಲ್ಲಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ವ್ಯಕ್ತಿಯೊಬ್ಬರು ನದಿಗೆ ಹಾರುವುದನ್ನು ನೋಡಿದ್ದಾಗಿ ದಾರಿಹೋಕರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ‌‌ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕಾಗಮಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇಂದು ಬೆಳಗ್ಗೆ 10:30ರ ಸುಮಾರಿಗೆ ವ್ಯಕ್ತಿಯೊಬ್ಬರು ಮೇಲ್ಸೇತುವೆಯಲ್ಲಿ ಸ್ವಲ್ಪ ನಡೆದು ಬಳಿಕ ನದಿಗೆ ಹಾರಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪಣಂಬೂರು ಹಾಗೂ ಕಾವೂರು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜತೆಗೆ ಅಗ್ನಿಶಾಮಕ ದಳವೂ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದೆ. ಆದರೆ ಇದುವರೆಗೆ ಯಾರೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News