ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ಕುಟುಂಬದ ಮೂವರೂ ಸಾವು
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಲೂಕಿನ ಕೊಕ್ರಾಡಿ ಗ್ರಾಮದ ಅತ್ರಿಜಾಲು ಸಮೀಪದ ನಿವಾಸಿ ಚೇತನ್ (35) ಹಾಗೂ ಅವರ ಪುತ್ರಿ ತ್ರಿಶಾ ಹಾಗೂ ಅವರ ಪತ್ನಿ ಆಶಾ (30) ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸೋಮವಾರ ಮನೆಯೊಳಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ಕಾರ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಯಿತು.
ತ್ರಿಶಾ ಸೋಮವಾರ ರಾತ್ರಿಯೇ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು, ಚೇತನ್ ಅವರು ಮಂಗಳವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಕೆಲವೇ ಹೊತ್ತಿನಲ್ಲಿ ಅವರ ಪತ್ನಿ ಆಶಾ ಅವರೂ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಚೇತನ್ ಅವರು ತಮ್ಮ ಡೈರಿಯಲ್ಲಿ ತನ್ನ ಸಾವಿಗೆ ತಾನೇ ಕಾರಣ ಎಂದು ಬರೆದಿರುವುದಾಗಿ ತಿಳಿದು ಬಂದಿದೆ.
ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬೆಳ್ತಂಗಡಿ ವೃತ್ತನಿರೀಕ್ಷಕ ಸಂದೇಶ್ ಮಾರ್ಗದರ್ಶನ ದಲ್ಲಿ ತನಿಖೆ ನಡೆಯುತ್ತಿದೆ