ಕರಾವಳಿ ಭಾಗದಲ್ಲಿ ಐದು ದಿನ ಮಳೆ ಸಾಧ್ಯತೆ

Update: 2020-11-03 11:37 GMT

ಬೆಂಗಳೂರು, ನ.3: ಕರಾವಳಿ ಭಾಗದಲ್ಲಿ ನ.3ರಿಂದ ನ.7ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ನ.5 ಮತ್ತು 6ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. 

ಈಗಾಗಲೇ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದ್ದು ಮುಖ್ಯವಾಗಿ ಕೊಡಗಿನ ಭಾಗಮಂಡಲದಲ್ಲಿ, ಚಾಮರಾಜನಗರದ ಬಂಡೀಪುರದಲ್ಲಿ 2 ಸೆಂ.ಮೀ ಮಳೆಯಾಗಿದೆ ಎಂದು ತಿಳಿಸಿದ್ದಾರೆ.

ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನಲ್ಲಿ ನ.3ರಿಂದ ನ.7ರವರೆಗೆ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ನ.4ರಿಂದ ನ.6ರವರಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News