ಕುಂದಾಪುರ ಪುರಸಭೆ ಅಧ್ಯಕ್ಷರಾಗಿ ವೀಣಾ ಭಾಸ್ಕರ್, ಉಪಾಧ್ಯಕ್ಷರಾಗಿ ಸಂದೀಪ್ ಖಾರ್ವಿ ಅವಿರೋಧ ಆಯ್ಕೆ
Update: 2020-11-03 17:41 IST
ಕುಂದಾಪುರ, ನ.3: ಕುಂದಾಪುರ ಪುರಸಭೆಯ ನೂತನ ಅಧ್ಯಕ್ಷರಾಗಿ ವೀಣಾ ಭಾಸ್ಕರ್ ಹಾಗೂ ಉಪಾಧ್ಯಕ್ಷರಾಗಿ ಸಂದೀಪ್ ಖಾರ್ವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 23 ಸದಸ್ಯ ಬಲದ ಪುರಸಭೆಯಲ್ಲಿ ಬಿಜೆಪಿ 14, ಕಾಂಗ್ರೆಸ್ 8 ಮತ್ತು ಓರ್ವ ಪಕ್ಷೇತರ ಸದಸ್ಯರಿದ್ದಾರೆ. ಬಿಜೆಪಿ ಬಹುಮತ ಹೊಂದಿರುವುದರಿಂದ ಚುನಾವಣೆಗೆ ಇವರಿಬ್ಬರೇ ನಾಮಪತ್ರ ಸಲ್ಲಿಸಿದ್ದರು. ಇದರಿಂದ ಚುನಾವಣೆ ನಡೆಯದೇ ಅವಿರೋಧ ಆಯ್ಕೆ ನಡೆಯಿತು.
ಚುನಾವಣಾಧಿಕಾರಿಯಾಗಿದ್ದ ಕುಂದಾಪುರ ತಹಶೀಲ್ದಾರ್ ಆನಂದಪ್ಪ ನಾಯ್ಕ ಫಲಿತಾಂಶವನ್ನು ಘೋಷಿಸಿದರು. ವೀಣಾ ಟಿ.ಟಿ.ರೋಡ್ ವಾರ್ಡ್ ಸದಸ್ಯರಾದರೆ, ಸಂದೀಪ್ ಖಾರ್ವಿ ಬಹದ್ದೂರು ಷಾ ವಾರ್ಡ್ ಸದಸ್ಯರಾಗಿದ್ದಾರೆ. ಇವರಿಬ್ಬರು ಮೊದಲ ಬಾರಿಗೆ ಪುರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮೊದಲಾದವರು ಅಭಿನಂದಿಸಿದರು.