×
Ad

ಕ್ರಿಕೆಟ್‌ ಬೆಟ್ಟಿಂಗ್‌: ಮೂವರು ಆರೋಪಿಗಳ ಬಂಧನ

Update: 2020-11-04 15:45 IST

ಶಿವಮೊಗ್ಗ, ನ.4: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 2.21 ಲಕ್ಷ ರೂ. ಹಾಗೂ 3 ಮೊಬೈಲ್ ಫೋನ್ ಗಳನ್ನು ಮಂಗಳವಾರ ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಅಜೇಯ  (35), ಕಿರಣ (32) ಹಾಗೂ ಸಂದೀಪ್‌ (28) ಬಂಧಿತ ಆರೋಪಿಗಳು.

ನಗರದ ಜಯನಗರ ಠಾಣಾ ವ್ಯಾಪ್ತಿಯ ತಿಲಕ್‌ ನಗರ ಮುಖ್ಯ ರಸ್ತೆಯ ವಿಶ್ವೇಶ್ವರಯ್ಯ ಕಾಂಪ್ಲೆಕ್ಸ್‌ನಲ್ಲಿರುವ ಮೊಬೈಲ್‌ ಆಂಗಡಿಯಲ್ಲಿ ಆರೋಪಿಗಳು ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಶಿವಮೊಗ್ಗ ಸಿಇಎನ್‌ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News