ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Update: 2020-11-04 10:26 GMT

ಹಾವೇರಿ. 4: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಪತ್ರಿಕೋದ್ಯಮ  ವೃತ್ತಿಯಲ್ಲಿ ತೊಡಗಿಕೊಳ್ಳಲು  ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ.

2020-21 ನೇ ಸಾಲಿನಲ್ಲಿ ಇಲಾಖೆಯ ಜಿಲ್ಲಾ ಕಚೇರಿಗೆ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಪರಿಶಿಷ್ಟ ಪಂಗಡದ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಕೊಳ್ಳಲಾಗುವುದು.  ಆಯ್ಕೆಯಾದ ಪ್ರತಿ ಅಪ್ರೆಂಟಿಸ್‍ಗೆ ಮಾಹೆಯಾನ ರೂ 15,000 ಗಳ ಸ್ಪೈಪೆಂಡ್ ನೀಡಲಾಗುವುದು.

ಅರ್ಜಿ  ಸಲ್ಲಿಸಲು  ನವೆಂಬರ್ 10 ಕೊನೆಯ ದಿನವಾಗಿರುತ್ತದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ  ಹೊಂದಿರಬೇಕು.  ವಯಸ್ಸು 40 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಎಸೆಸೆಲ್ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕು. 

 ಅರ್ಜಿ ನಮೂನೆ ಹಾಗೂ ಇತರ  ಮಾಹಿತಿಗಾಗಿ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ವಿದ್ಯಾನಗರ  ಹಾವೇರಿ -581110 ದೂರವಾಣಿ ಸಂಖ್ಯೆ 08375-233092   ಅಥವಾ ಇ-ಮೇಲ್ dipohaveri@gmail.com ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News