×
Ad

ಡ್ರಗ್ಸ್ ದಂಧೆ ಆರೋಪ ಪ್ರಕರಣ: ಆದಂ ಪಾಷಾ ಖಾಸಗಿ ಆಸ್ಪತ್ರೆಗೆ ದಾಖಲು

Update: 2020-11-04 17:28 IST

ಬೆಂಗಳೂರು, ನ.4: ಡ್ರಗ್ಸ್ ದಂಧೆ ಆರೋಪ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಆರೋಪಿ ಆದಂ ಪಾಷಾ ಅನ್ನು ಅನಾರೋಗ್ಯ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿರುವ ಅವರನ್ನು ನಗರದ ಜಯನಗರದ ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಎನ್‍ಸಿಬಿ ಅಧಿಕಾರಿಗಳಿಂದ ಬಂಧನವಾದ ಬಳಿಕ ಆದಂ ಪಾಷಾ ಕ್ವಾರಂಟೈನ್‍ಗೆ ಒಳಗಾಗಿದ್ದರು. ಕಳೆದ ಒಂದು ವಾರದಿಂದ ಅವರಿಗೆ ಆರೋಗ್ಯ ಸಮಸ್ಯೆ ಉಲ್ಬಣವಾಗಿತ್ತು. ಹೀಗಾಗಿ, ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಮಂಗಳವಾರ ತಡರಾತ್ರಿ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾದ ಕಾರಣ ಹೊರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News