'ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಕೆಗೆ ಕಾಲಾವಕಾಶ'
ಉಡುಪಿ, ನ.4: ಕ್ಷೇತ್ರೀಯ ಭವಿಷ್ಯ ನಿಧಿ ವತಿಯಿಂದ ಡಿಜಿಟಲ್ ಜೀವನ ಪ್ರಮಾಣ ಪತ್ರವನ್ನು ಪ್ರತಿವರ್ಷದಂತೆ ಈ ಬಾರಿಯೂ ನವಂಬರ್ ತಿಂಗಳಿನಲ್ಲಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಹೊಸ ನಿಯಮದಂತೆ ಸಲ್ಲಿಸಿರುವ ಜೀವನ ಪ್ರಮಾಣ ಪತ್ರದ ಸಿಂಧುತ್ವ ಒಂದು ವರ್ಷದವರೆಗೆ ಇರುತ್ತದೆ ಎಂದು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಿಂಚಣಿದಾರರು ಪ್ರಮಾಣ ಪತ್ರ ಸಲ್ಲಿಸಿದ ದಿನಾಂಕದಿಂದ ಸರಿಯಾಗಿ ಒಂದು ವರ್ಷದ ನಂತರ ಮತ್ತೊಮ್ಮೆ ಪ್ರಮಾಣ ಪತ್ರ ಸಲ್ಲಿಸಬಹು ದಾಗಿದ್ದು. ಪಿಂಚಣಿದಾರರು ತಾವು ಬ್ಯಾಂಕ್ ಖಾತೆ ಹೊಂದಿರುವ ಬ್ಯಾಂಕ್ ಶಾಖೆಯಲ್ಲಿ ಅಥವಾ ಸಮೀಪದ ಸಾಮಾನ್ಯ ಸೇವಾ ಕೇಂದ್ರದಲ್ಲಿ (ಸಿಎಸ್‌ಸಿ ಸೆಂಟರ್) ಪ್ರಮಾಣ ಪತ್ರವನ್ನು ಸಲ್ಲಿಸಬಹುದಾಗಿದೆ.
ಪಿಂಚಣಿದಾರರು ತಪ್ಪದೇ ತಮ್ಮ ಆಧಾರ್ ಕಾರ್ಡ, ಬ್ಯಾಂಕ್ ಪಾಸ್‌ಬುಕ್, ಪಿಂಚಣಿ ಆದೇಶ ಸಂಖ್ಯೆ(ಪಿಪಿಓ)ಹಾಗೂ ಮೊಬೈಲ್ ನಂ.ನೊಂದಿಗೆ ಬ್ಯಾಂಕ್ ಶಾಖೆಯಲ್ಲಿ ಅಥವಾ ಸಮೀಪದ ಸಾಮಾನ್ಯ ಸೇವಾ ಕೇಂದ್ರದಲ್ಲಿ ಪ್ರಮಾಣ ಪತ್ರ ಸಲ್ಲಿಸಬಹುದು. ಕೋವಿಡ್-19 ಹಿನ್ನಲೆಯಲ್ಲಿ ಸುರಕ್ಷಿತಾ ಅಂತರವನ್ನು ಕಾಯ್ದುಕೊಂಡು ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಸುವಂತೆ ಆಯುಕ್ತರ ಪ್ರಕಟಣೆ ತಿಳಿಸಿದೆ.