ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ
Update: 2020-11-04 21:30 IST
ಶಿವಮೊಗ್ಗ, ನ.04: ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.
ರಿಪ್ಪನ್‌ಪೇಟೆ ಗ್ರಾಮ ಲೆಕ್ಕಾಧಿಕಾರಿ ರಾಘವೇಂದ್ರ ಅವರು ಕೆದ್ದಲಗುಡ್ಡೆ ಗ್ರಾಮದ ಜೋಸೆಫ್ ಚಾಕೋ ಎಂಬುವವರಿಂದ ಖಾತೆ ಬದಲಾವಣೆಗಾಗಿ ವ್ಯಕ್ತಿಯೊಬ್ಬರಿಂದ ಒಂದು ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ವಿಚಾರವಾಗಿ ಜೋಸೆಫ್ ಚಾಕೋ ಅವರು ಎಸಿಬಿಗೆ ದೂರು ನೀಡಿದ್ದರು. ಗ್ರಾಮಲೆಕ್ಕಾಧಿಕಾರಿ ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಗ್ರಾಮ ಲೆಕ್ಕಾಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಎಸಿಬಿ ಡಿವೈಎಸ್‌ಪಿ ಲೋಕೇಶ್ ಮಾರ್ಗದರ್ಶನದಲ್ಲಿ ಇನ್ಸ್‌ಫೆಕ್ಟರ್ ವಿರೇಂದ್ರ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.