×
Ad

ರಾಜ್ಯದ ಮುಖ್ಯ ಮಂತ್ರಿ ಬದಲಾವಣೆ ಇಲ್ಲ : ಪ್ರಹ್ಲಾದ್ ಜೋಶಿ

Update: 2020-11-04 21:39 IST

ಮಂಗಳೂರು, ನ.4: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಸ್ತಾಪ ಇಲ್ಲ. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದು ವರಿಯಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾಜೋಶಿ ತಿಳಿಸಿದ್ದಾರೆ.

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರು ಬುಧವಾರ ಸುದ್ದಿಗಾರರನ್ನುದ್ದೇಶಿಸಿ  ಮಾತನಾಡುತ್ತಿದ್ದರು. ಮಂಗಳೂರಿನಲ್ಲಿ ಗುರುವಾರ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಬುಧವಾರ ನಗರಕ್ಕೆ ಆಗಮಿಸಿದ್ದರು.

ಅರ್ನಾಬ್ ಗೋ ಸ್ವಾಮಿಯ ಬಂಧನದೊಂದಿಗೆ ಮಹಾರಾಷ್ಟ್ರ ಸರಕಾರದ ಪತನ ಆರಂಭಗೊಂಡಿದೆ .ಈಗ ಅಭಿವ್ಯಕ್ತಿ ಸ್ವಾತಂತ್ರ್ಯದ  ಬಗ್ಗೆ ಕಾಂಗ್ರೆಸ್ ಪ್ರಮುಖರು, ಅಂದು ಪ್ರಶಸ್ತಿಗಳನ್ನು ಹಿಂದಿರುಗಿಸಿದವರೆಲ್ಲ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರೇ ಮುಂದುವರಿಯುತ್ತಾರೆ. ಸುರೇಶ್ ಅಂಗಡಿ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಪಕ್ಷ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಲಿದೆ. ಆದರೆ, ಈ ಕುರಿತು ಪಕ್ಷದಲ್ಲಿ ಚರ್ಚೆಯಾಗಿಲ್ಲ ಎಂದು ಅವರು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು. ಮದುವೆಗಾಗಿ ಮತಾಂತರ ಕುರಿತ ಕಾಯ್ದೆ ಜಾರಿಗೆ ತರುವುದು ಉತ್ತಮ ಚಿಂತನೆ, ನನ್ನ ಬೆಂಬಲ ಇದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News