ಬೆಂಗಳೂರು ಗಲಭೆ ಪ್ರಕರಣ: ಸಂಪತ್ ರಾಜ್ ಸ್ನೇಹಿತರ ಸಂಪರ್ಕ ಕಡಿತ ?
Update: 2020-11-04 22:08 IST
ಬೆಂಗಳೂರು, ನ.4: ಡಿಜೆ-ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಕ್ಕೆ ಸಿಲುಕಿರುವ ಮಾಜಿ ಮೇಯರ್ ಸಂಪತ್ ರಾಜ್ ಅವರ ಸ್ನೇಹಿತರ ಮೊಬೈಲ್ ಸಂಪರ್ಕ ಕಡಿತಗೊಂಡಿದೆ ಎಂದು ಹೇಳಲಾಗುತ್ತಿದೆ.
ಸಂಪತ್ ರಾಜ್ ಎಲ್ಲಿದ್ದಾರೆಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಅವರ ಕೆಲವು ಸ್ನೇಹಿತರನ್ನು ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು. ಇದೀಗ ಅವರ ಮೊಬೈಲ್‍ಗಳು ಸ್ವಿಚ್‍ಆಫ್ ಆಗಿವೆ. ಈಗಾಗಲೇ ಸಿಸಿಬಿ ಪೊಲೀಸರು ಮಾಜಿ ಮೇಯರ್ ಸಂಪತ್ ರಾಜ್ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯ ವೈದ್ಯರು ಮತ್ತು ಆಡಳಿತ ಮಂಡಳಿಯವರನ್ನು ವಿಚಾರಣೆಗೊಳಪಡಿಸಿ ಕೆಲವು ಮಾಹಿತಿಗಳನ್ನು ಪಡೆದಿದೆ ಎನ್ನಲಾಗಿದೆ.
ತಲೆಮರೆಸಿಕೊಂಡಿರುವ ಸಂಪತ್ ರಾಜ್‍ಗಾಗಿ ಸಿಸಿಬಿ ಪೊಲೀಸರ ವಿಶೇಷ ತಂಡಗಳು ಸತತವಾಗಿ ತೀವ್ರ ಶೋಧ ನಡೆಸಿದರೂ ಈತನಕ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಮೂಲಗಳು ತಿಳಿಸಿವೆ.