ಅಲೆಮಾರಿ ಸಮುದಾಯಕ್ಕೆ ಸಹಾಯಧನಕ್ಕೆ ಅರ್ಜಿ ಆಹ್ವಾನ

Update: 2020-11-04 17:26 GMT

ಬೆಂಗಳೂರು, ನ.4: ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ದಿ ನಿಗಮದಿಂದ 2020-21ನೇ ಸಾಲಿನಲ್ಲಿ ಅಲೆಮಾರಿ, ಅರೆ ಅಲೆಮಾರಿ ಜನಾಂಗಕ್ಕೆ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅಲೆಮಾರಿ ಜನಾಂಗಕ್ಕೆ ಸೇರಿದ ಬೈರಾಗಿ, ಬಾಲ ಸಂತೋಷಿ, ಬಾಜಿಗರ್, ಬುಡಬುಡಕಿ, ಜೋಶಿ-ಗೋಂಧಳಿ, ಚಿತ್ರಕಥಿ-ಜೋಷಿ, ಧೋಲಿ, ಢವೇರಿ, ದೊಂಬರಿ, ಘಿಸಾಡಿ, ಗಾರುಡಿ, ಗೋಪಾಲ್, ಗೊಂದಳಿ, ಹೆಳವ, ಜೋಗಿ, ಕೇಲ್ಕರಿ, ಕೋಲ್ಹಟಿ, ನಂದಿವಾಲ, ಸರೋಡಿ, ಹಾವಗಾರ್, ದರ್ವೇಶಿ, ಕಾಶಿ ಕಪಾಡಿ, ದೊಂಬಿದಾಸ, ಪಿಚಗುಂಟಲ, ಮಸಸಣಿಯ ಯೋಗಿ ಜನರ ಆರ್ಥಿಕ ಅಭಿವೃದ್ದಿಗಾಗಿ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ.

ಸ್ವಯಂಉದ್ಯೋಗ ಸಾಲ ಯೋಜನೆ, ಸ್ವ-ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನದ ಸೌಲಭ್ಯ ಪಡೆಯಲು ನ.12ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಭಿವೃದ್ದಿ ನಿಗಮದ ವೆಬ್‍ಸೈಟ್ www.dbcdc.Karnataka.gov.in ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದರೆ ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಕರ್ನಾಟಕ ಅಲೆಮಾರಿ, ಅರೆಅಲೆಮಾರಿ ಅಭಿವೃದ್ದಿ ನಿಗಮದ ಆಯಾ ಜಿಲ್ಲಾ ಕಚೇರಿಗೆ ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮುಖ್ಯ ಕಚೇರಿ ವಿಳಾಸವು ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್‍ರೋಡ್, ಗಂಗಾನಗರ, ಬೆಂಗಳೂರು ಉತ್ತರ ಜಿಲ್ಲೆ, ಬೆಂ.32 ಆಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News