×
Ad

ಅರ್ನಬ್ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಕಸ್ಟಡಿ

Update: 2020-11-04 23:37 IST

ಮುಂಬೈ:  ರಿಪಬ್ಲಿಕ್ ಟಿವಿಯ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಗೆ ಅಲಿಬಾಗ್ ನ್ಯಾಯಾಲಯದ ಮ್ಯಾಜಿಸ್ಟ್ರೇಟ್  ಜಾಮೀನು ನೀಡಲು ನಿರಾಕರಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದರು.

 ಅರ್ನಬ್ ರನ್ನು 14 ದಿನಗಳ ಕಾಲ ಕಸ್ಟಡಿಗೆ ಒಪ್ಪಿಸುವಂತೆ ಪೊಲೀಸರು ನ್ಯಾಯಾಲಯವನ್ನು ಕೋರಿದರು. ಗೋಸ್ವಾಮಿ ಪ್ರಭಾವಿ ವ್ಯಕ್ತಿಯಾಗಿದ್ದು, ಪ್ರಕರಣದ ಪುರಾವೆಯನ್ನು ತಿರುಚಬಲ್ಲರು ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದರು.

2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಹಾಗೂ ಅವರ ತಾಯಿ ಕುಮುದಾ ನಾಯಕ್ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣವೊಂದಕ್ಕೆ ಸಂಬಂಧಿಸಿ ಗೋಸ್ವಾಮಿ ಅವರನ್ನು ಅಲಿಬಾಗ್ ಪೊಲೀಸರು ಬಂಧಿಸಿದ್ದಾರೆ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News