×
Ad

ಉಡುಪಿ ಜಿಲ್ಲೆಯ 47 ಮಂದಿಯಲ್ಲಿ ಕೋವಿಡ್ ಸೋಂಕು

Update: 2020-11-05 19:33 IST

ಉಡುಪಿ, ನ.5: ಜಿಲ್ಲೆಯಲ್ಲಿ ಗುರುವಾರ 47 ಮಂದಿಯಲ್ಲಿ ಹೊಸದಾಗಿ ಕೋವಿಡ್ ಪಾಸಿಟಿವ್ ಕಂಡು ಬಂದಿದೆ. ಅಲ್ಲದೇ ದಿನದಲ್ಲಿ ಒಟ್ಟು 66 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ ಮಕ್ಕಳೂ ಸೇರಿದಂತೆ 29 ಮಂದಿ ಪುರುಷರು ಹಾಗೂ 18 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ 16 ಮಂದಿ ಪುರುಷರು ಹಾಗೂ 12 ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 19, ಕುಂದಾಪುರ ತಾಲೂಕಿನ 16 ಹಾಗೂ ಕಾರ್ಕಳ ತಾಲೂಕಿನ 6 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಉಳಿದಂತೆ ಹೊರಜಿಲ್ಲೆಯಿಂದ ಚಿಕಿತ್ಸೆಗೆಂದು ಬಂದ ಆರು ಮಂದಿಯಲ್ಲೂ ಪಾಸಿಟಿವ್ ಕಂಡುಬಂದಿದೆ ಎಂದು ಡಾ.ಸೂಡ ಹೇಳಿದ್ದಾರೆ.

ದಿನದಲ್ಲಿ ಪಾಸಿಟಿವ್ ಬಂದ 47 ಮಂದಿಯಲ್ಲಿ ಆರು ಮಂದಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದರೆ, ಉಳಿದ 41 ಮಂದಿ ತಮ್ಮ ತಮ್ಮ ಮನೆ ಗಳಲ್ಲೇ ಹೋಮ್ ಐಸೋಲೇಷನ್‌ನಲ್ಲಿದ್ದು ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ತಿಳಿಸಿದರು.

66 ಮಂದಿ ಗುಣಮುಖ: ಬುಧವಾರ ಜಿಲ್ಲೆಯಲ್ಲಿ 66 ಮಂದಿ ಸೋಂಕಿ ನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಸದ್ಯ 21,468 ಆಗಿದೆ. ಜಿಲ್ಲೆಯಲ್ಲಿ ಸದ್ಯ 431 ಮಂದಿ ಸಕ್ರಿಯ ಕೋವಿಡ್ ಸೋಂಕಿತರಿದ್ದು, ಆಸ್ಪತ್ರೆಗಳಲ್ಲಿ ಮತ್ತು ಮನೆಗಳ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದವರು ವಿವರಿಸಿದರು.

2435 ನೆಗೆಟಿವ್: ಜಿಲ್ಲೆಯಲ್ಲಿ ಬುಧವಾರ ಒಟ್ಟು 2480 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಇವರಲ್ಲಿ 2435 ಮಂದಿ ನೆಗೆಟಿವ್ ಬಂದಿದ್ದು, 45 (ಐಸಿಎಂಆರ್ ವರದಿ)ಮಂದಿ ಮಾತ್ರ ಪಾಸಿಟಿವ್ ಬಂದಿದ್ದಾರೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ 22,082 ಆಗಿದೆ.

ಜಿಲ್ಲೆಯಲ್ಲಿ ಬುಧವಾರದವರೆಗೆ ಒಟ್ಟು 1,92,132 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1,70,050 ಮಂದಿ ನೆಗೆಟಿವ್ ಹಾಗೂ 22,082 ಮಂದಿ ಪಾಸಿಟಿವ್ ಬಂದಿದ್ದಾರೆ. ಈಗಾಗಲೇ 21,468 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಒಟ್ಟು 185 ಮಂದಿ ಮೃತಪಟ್ಟಿದ್ದಾರೆ.

ಒಬ್ಬರ ಸಾವು: ಕೋವಿಡ್ ಸೋಂಕಿನಿಂದ ಬುಧವಾರ ಜಿಲ್ಲೆಯಲ್ಲಿ ಉಡುಪಿ ತಾಲೂಕಿನ 54 ವರ್ಷ ಪ್ರಾಯದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ರಕ್ತದೊತ್ತಡ, ನ್ಯೂಮೋನಿಯಾವಿದ್ದ ಇವರು ಉಸಿರಾಟದ ತೊಂದರೆಯಿಂದ ಬಳಲಿದ್ದು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೊಳಪಡಿ ಸಿದಾಗ ಪಾಸಿಟಿವ್ ಬಂದಿದ್ದರು. ಚಿಕಿತ್ಸೆ ಸಫಲವಾಗದೇ ಇವರು ನಿನ್ನೆ ಮೃತಪಟ್ಟಿದ್ದಾರೆ. ಇದರಿಂದ ಕೊರೋನಕ್ಕೆ ಬಲಿಯಾದವರ ಸಂಖ್ಯೆ 185 ಆಗಿದೆ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News