×
Ad

ನ.7ರಂದು ಚಿಟ್ಟಾಣಿ ಪ್ರಶಸ್ತಿ ಪ್ರದಾನ

Update: 2020-11-05 20:32 IST

ಉಡುಪಿ, ನ.5: ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ಕಳೆದ ಏಳು ವರ್ಷಗಳಿಂದ ನೀಡುತ್ತಾ ಬಂದಿರುವ ಚಿಟ್ಟಾಣಿ ಹಾಗೂ ಟಿ.ವಿ.ರಾವ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನ.7ರ ಸಂಜೆ 6 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಪನ್ನಗೊಳ್ಳಲಿದೆ.

ಪರ್ಯಾಯ ಶ್ರೀಅದಮಾರು ಮಠಾಧೀಶ ಶ್ರೀಈಶಪ್ರಿಯತೀರ್ಥ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹ ಸಂದೇಶ ನೀಡಲಿದ್ದಾರೆ. ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಸ್ತ್ರೀವೇಷಧಾರಿ ಮೂರೂರು ವಿಷ್ಣು ಭಟ್ಟರಿಗೂ, ಅಭಿಮಾನಿ ಬಳಗದ ಗೌರವಾಧ್ಯಕ್ಷರಾಗಿದ್ದ ಟಿ.ವಿ.ರಾವ್ ಪ್ರಶಸ್ತಿ ಯನ್ನು ಹವ್ಯಾಸಿ ಹಿಮ್ಮೇಳ ವಾದಕ, ವೇಷಧಾರಿ ಅಜಿತ್ ಕುಮಾರ್ ಅಂಬಲಪಾಡಿ ಇವರಿಗೂ ಪ್ರದಾನ ಮಾಡಲಾಗುವುದು ಎಂದು ಅಭಿಮಾನಿ ಬಳಗದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಮತ್ತು ಕಾರ್ಯದರ್ಶಿ ಎಂ. ಗೋಪಿಕೃಷ್ಣ ರಾವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News