ನ.6ರಿಂದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ
Update: 2020-11-05 20:49 IST
ಬೆಂಗಳೂರು, ನ.5: ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ನ.6ರಿಂದ ನ.8ರವರೆಗೆ ಮಳೆಯಗಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ಬೆಂಗಳೂರಿನ ಕೆಲವೆಡೆ ನ.6ರಂದು ಹಗುರಾದ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ತಿಳಿಸಿದರು.
ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಹಲವೆಡೆ ಮಳೆಯಾಗಲಿದ್ದು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.