ಶಾಲೆ ಪ್ರಾರಂಭಿಸುವ ಬಗ್ಗೆ ನ.6ರಂದು ಎಸ್‍ಡಿಎಂಸಿ ಸದಸ್ಯರಿಂದ ಅಭಿಪ್ರಾಯ ಸಂಗ್ರಹ

Update: 2020-11-05 15:21 GMT

ಬೆಂಗಳೂರು, ನ.5: 2020-21 ಸಾಲಿನಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಚರ್ಚಿಸಲು ಹಾಗೂ ಅಭಿಪ್ರಾಯ ಸಂಗ್ರಹಿಸಲು ನ.6ರಂದು ಮಧ್ಯಾಹ್ನ 3ರಿಂದ 5.30ರವರೆಗೆ ರಾಜ್ಯದ ಆಯಾ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಕೇಂದ್ರದ ಸ್ವೀಕೃತಿ ಕೇಂದ್ರಗಳಲ್ಲಿ ವೀಡಿಯೋ ಕಾನ್ಫರೆನ್ಸ್ ಆಯೋಜಿಸಲಾಗಿದೆ.

ವೀಡಿಯೋ ಕಾನ್ಫರೆನ್ಸ್‍ನಲ್ಲಿ ಭಾಗವಹಿಸಲು ಬೆಳಗಾವಿ ಮತ್ತು ಕಲಬುರಗಿ ವಿಭಾಗಕ್ಕೆ 3ರಿಂದ 4ರವರೆಗೆ ಹಾಗೂ ಬೆಂಗಳೂರು ಮತ್ತು ಮೈಸೂರು ವಿಭಾಗಕ್ಕೆ 5ರವರೆಗೆ ಸಮಯವನ್ನು ನಿಗದಿ ಪಡಿಸಲಾಗಿದೆ. ಶಾಲೆಯ ಮುಖ್ಯ ಶಿಕ್ಷಕರು, ಇಲಾಖೆಯ ಉಪನಿರ್ದೇಶಕರು, ಪ್ರತಿ ತಾಲೂಕಿನಿಂದ ಗ್ರಾಮೀಣ ಭಾಗದ ಹಾಗೂ ನಗರ ಪ್ರದೇಶದಿಂದ ಒಬ್ಬರು ಎಸ್‍ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಪಾಲಕರಿಂದ ಅಭಿಪ್ರಾಯ ಸಂಗ್ರಹಿಸಬೇಕು.

ಚರ್ಚಿಸಬೇಕಾದ ವಿಷಯಗಳು: ಶಾಲೆಗಳನ್ನು ಪ್ರಾರಂಭಿಸಲು ತರಗತಿಗಳನ್ನು ಮತ್ತು ದಿನಾಂಕ ನಿಗದಿಪಡಿಸುವ ಬಗ್ಗೆ, ಶಾಲೆಗಳನ್ನು ಪ್ರಾರಂಭಿಸುವ ಮೊದಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ, ಶಾಲೆಯು ನಡೆಯುವ ಅವಧಿ ನಿಗದಿಪಡಿಸುವ ಬಗ್ಗೆ ಹಾಗೂ ಪೋಷಕರ ಅಭಿಪ್ರಾಯ ಸಂಗ್ರಹಿಸಿ ಮಂಡಿಸಬೇಕಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News