×
Ad

ಕ್ವಾಲಿಫೈಯರ್1: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಬೃಹತ್ ಮೊತ್ತ ಪೇರಿಸಿದ ಮುಂಬೈ ಇಂಡಿಯನ್ಸ್

Update: 2020-11-05 21:16 IST

ದುಬೈ: ಐಪಿಎಲ್ 2020 ಫೈನಲ್ ಪ್ರವೇಶಿಸಲು ಕಾತರದಲ್ಲಿರುವ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಇಂದು ಮೊದಲ ಕ್ವಾಲಿಫೈಯರ್ ನಲ್ಲಿ ಸೆಣಸಾಡುತ್ತಿದ್ದು, ಮೊದಲ ಇನಿಂಗ್ಸ್ ಆಡಿರುವ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಗೆ 201 ರನ್ ಗಳ ಬೃಹತ್ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿತು.

ನಾಯಕ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾಗಿ ನಿರಾಶೆ ಮೂಡಿಸಿದರು. ಆರಂಭಿಕ ಆಟಗಾರ ಡಿಕಾಕ್ 25 ಎಸೆತಗಳಲ್ಲಿ 40 ರನ್ ಹಾಗೂ ಸೂರ್ಯಕುಮಾರ್ ಯಾದವ್ 51 (38 ಎಸೆತ) ರನ್ ಸಿಡಿಸಿದರು. ಇಶಾನ್ ಕಿಶಾನ್ 55( 30 ಎಸೆತ) ಹಾಗೂ ಹಾರ್ದಿಕ್ ಪಾಂಡ್ಯ 37 (14 ಎಸೆತ) ರನ್ ಗಳಿಸಿ ತಂಡವನ್ನು ಆಧರಿಸಿದರು.

ಡೆಲ್ಲಿ ಕ್ಯಾಪಿಟಲ್ಸ್ ಪರ ಆರ್.ಆಶ್ವಿನ್ 3, ನೋರ್ಟ್ಜೆ ಹಾಗೂ ಸ್ಟೋನಿಸ್ ತಲಾ 1 ವಿಕೆಟ್ ಪಡೆದರು.

ನಾಲ್ಕು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಈ ಬಾರಿ 14 ಪಂದ್ಯಗಳ ಪೈಕಿ ಒಂಬತ್ತರಲ್ಲಿ ಜಯ ಗಳಿಸಿ ಪ್ಲೇ ಆಫ್‌ಗೆ ಅರ್ಹತೆ ಗಳಿಸಿದೆ. ಡೆಲ್ಲಿ ಎಂಟು ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನ ಗಳಿಸಿತ್ತು. ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ ಪ್ರವೇಶಿಸಲಿದೆ ಹಾಗೂ ಸೋತ ತಂಡ ಕ್ವಾಲಿಫೈಯರ್2 ರಲ್ಲಿ ಆಡಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News