×
Ad

ವಿದ್ಯುತ್ ದರ ಹೆಚ್ಚಳ ಆದೇಶ ಹಿಂಪಡೆಯುವಂತೆ ಕಾಂಗ್ರೆಸ್ ಆಗ್ರಹ

Update: 2020-11-05 22:17 IST

ಬೆಂಗಳೂರು, ನ.5: ಲಾಕ್‍ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಲಕ್ಷಾಂತರ ಜನರು ಕೆಲಸ ಕಳೆದುಕೊಂಡಿದ್ದಾರೆ. ವ್ಯಾಪಾರ, ಉದ್ದಿಮೆಗಳು ನಷ್ಟ ಅನುಭವಿಸುತ್ತಿವೆ. ಈ ಸಂದರ್ಭದಲ್ಲಿ ಜನವಿರೋಧಿ ಬಿಜೆಪಿ ಸರಕಾರವು ವಿದ್ಯುತ್ ದರವನ್ನು ಏಕಾಏಕಿ ಪ್ರತಿ ಯುನಿಟ್‍ಗೆ 40 ಪೈಸೆಯಷ್ಟು ಹೆಚ್ಚಿಸಿದೆ. ಕೂಡಲೇ ಸರಕಾರವು ಈ ಆದೇಶವನ್ನು ಹಿಂಪಡೆಯಬೇಕೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News