ವಿಚಾರಣೆಗೆ ಕರೆದು ಅರಣ್ಯಾಧಿಕಾರಿಗಳಿಂದ ರಕ್ಷಕನ ಮೇಲೆ ಹಲ್ಲೆ ಆರೋಪ: ಎಫ್‌ಐಆರ್ ದಾಖಲು

Update: 2020-11-05 18:23 GMT

ಚಾಮರಾಜನಗರ, ನ.5: ವಲಯ ಅರಣ್ಯಾಧಿಕಾರಿ ಹಾಗೂ ಅರಣ್ಯ ರಕ್ಷಕನನ್ನು ವಿಚಾರಣೆಗೆ ಕರೆದು ಮನ ಬಂದಂತೆ ಥಳಿಸಿರುವುದಾಗಿ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿ ವಲಯ ಅರಣ್ಯಾಧಿಕಾರಿ ಶಾಂತಪ್ಪ ಪೂಜಾರ್ ಹಾಗೂ ಅರಣ್ಯ ರಕ್ಷಕ ಮಂಜುನಾಥ್ ವಿರುದ್ಧ ಉಮೇಶ್ ಹಾಗೂ ಗಿರೀಶ್ ಎಂಬವರು ಪಟ್ಟಣ ಠಾಣೆಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ.

ಚಾಮರಾಜನಗರ ತಾಲೂಕಿನ ಹೊಂಗಲವಾಡಿ ಗ್ರಾಮದ ಉಮೇಶ್ ಹಾಗೂ ಗಿರೀಶ್ ಎಂಬವರ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿ ಜಾಮೀನಿನ ಮೇಲೆ ಹೊರಬಂದಿದ್ದರು. ಇವರಿಬ್ಬರಿಗೂ ವಿಚಾರಣೆಗೆ ಹಾಜರಾಗಬೇಕೆಂದು ಅರಣ್ಯ ಇಲಾಖೆ ನೋಟಿಸ್ ನೀಡಿದ ಹಿನ್ನೆಲೆ, ಎಸಿಎಫ್ ಕಚೇರಿಗೆ ತೆರಳಿದ್ದರು. ಈ ವೇಳೆ, ಉದ್ದೇಶಪೂರ್ವಕವಾಗಿ ಆರ್‌ಎಫ್‌ಒ ಶಾಂತಪ್ಪ ಪೂಜಾರ್, ಅರಣ್ಯ ರಕ್ಷಕ ಮಂಜುನಾಥ್ ಸೇರಿ ಥಳಿಸಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಹಲ್ಲೆಗೊಳಗಾದವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಮೇಶ್ ಹಾಗೂ ಗಿರೀಶ್ ವಿರುದ್ಧ ಆರ್‌ಎಫ್‌ಒ ಶಾಂತಪ್ಪ ಪೂಜಾರ್ ಚಾಮರಾಜನಗರ ಪಟ್ಟಣ ಠಾಣೆಗೆ ಪ್ರತಿದೂರು ನೀಡಿದ್ದು, ಸಮವಸ್ತ್ರ ಹಿಡಿದು, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಪ್ರತಿ ದೂರು ದಾಖಲಿಸಿದ್ದಾರೆ.

ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News