ಸಿಎಂ ಬೆಂಗಾವಲು ವಾಹನ ಅಪಘಾತ: ಇಬ್ಬರು ಸಿಬ್ಬಂದಿಗೆ ಗಾಯ
Update: 2020-11-06 17:00 IST
ಚಿಕ್ಕಮಗಳೂರು, ನ.6: ಸಿಎಂ ಬಿಎಸ್ ಯಡಿಯೂರಪ್ಪ ಅವರ ಬೆಂಗಾವಲು ವಾಹನವೊಂದು ಪಲ್ಟಿಯಾದ ಪರಿಣಾಮ, ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಜೇನುಗದ್ದೆಯ ಬಳಿ, ಸಿಎಂ ಬಿಎಸ್ ಯಡಿಯೂರಪ್ಪ ಅವರ ವಾಹನವನ್ನು ಹಿಂಬಾಲಿಸುತ್ತಿದ್ದ ಬೆಂಗಾವಲು ವಾಹನವೊಂದು ಪಲ್ಟಿಯಾಗಿದೆ. ಇದರಿಂದಾಗಿ ಜೀಪ್ ನಲ್ಲಿದ್ದ ಇಬ್ಬರು ಸಿಬ್ಬಂದಿಗಳಿಗೆ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ.