ಗೋಹತ್ಯೆ ನಿಷೇಧ ಕಾನೂನು ಜಾರಿಯಾಗುವ ಅಗತ್ಯವಿದೆ: ಸಚಿವ ಡಾ.ಸುಧಾಕರ್

Update: 2020-11-06 14:02 GMT

ಬೆಂಗಳೂರು, ನ. 6: ದೇಶದಲ್ಲಿ ಗೋವು ಪವಿತ್ರ ಎಂದು ಪರಿಗಣನೆಯಾಗಿದ್ದು, ಗೋಹತ್ಯೆಯಿಂದ ಪಾರಂಪರಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಗೋಹತ್ಯೆ ನಿಷೇಧ ಕಾನೂನು ಜಾರಿಯಾಗುವ ಅಗತ್ಯವಿದ್ದು, ಈ ಬಗ್ಗೆ ಇನ್ನಷ್ಟು ಚರ್ಚೆಯಾಗಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಗೋವು ಒಂದು ಪವಿತ್ರವಾದ ಪ್ರಾಣಿ ಎಂದು ನಂಬುವ ದೇಶ ನಮ್ಮದು. ಗೋವನ್ನು ಕುಟುಂಬದ ಸದಸ್ಯರಂತೆ ನಾವು ಗೌರವಿಸುತ್ತೇವೆ. ಗೋಹತ್ಯೆ ಹಿಂದೂಗಳ ಸಂಪ್ರದಾಯಕ್ಕೆ ವಿರುದ್ಧವಾದ ಕ್ರಮವಾಗಿದೆ. ಆದುದರಿಂದ ಗೋಹತ್ಯೆಗೆ ಅವಕಾಶ ನೀಡುವುದು ಸರಿಯಲ್ಲ. ದೇಶದಲ್ಲಿ ಗೋಹತ್ಯೆ ನಿಷೇಧ ಕ್ರಮ ಜಾರಿಯಾಗುವ ಅಗತ್ಯವಿದ್ದು, ಈ ಬಗ್ಗೆ ಇನ್ನಷ್ಟು ಚರ್ಚೆಯಾಗುವ ಅಗತ್ಯವಿದೆ' ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News