ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Update: 2020-11-06 14:21 GMT

ಬೆಂಗಳೂರು, ನ. 6: ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ 2020-2021ನೆ ಸಾಲಿನ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ ಮತ್ತು ಬ್ಯಾಂಕುಗಳ ಸಹಯೋಗದೊಂದಿಗೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದೆ.

ಅರ್ಜಿಯನ್ನು ನಿಗಮದ ವೆಬ್‍ಸೈಟ್ www.dbcdc.karnataka.gov.in ನಲ್ಲಿ ಪಡೆಯಬಹದಾಗಿದೆ. ಅರ್ಜಿ ಸಲ್ಲಿಸಲು ನ.12 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಕರ್ನಾಟಕ ಅಲೆಮಾರಿ/ಆರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಉತ್ತರ ಜಿಲ್ಲೆ 324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್, ಗಂಗಾನಗರ, ಬೆಂಗಳೂರು-560032, ಹಾಗೂ ದೂರವಾಣಿ ಸಂಖ್ಯೆ: 080-2353 9600 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಉತ್ತರ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News