×
Ad

ದ.ಕ. ಜಿಲ್ಲೆ : 79 ಮಂದಿಗೆ ಸೋಂಕು; ಕೋವಿಡ್‌ಗೆ ಇಬ್ಬರು ಬಲಿ

Update: 2020-11-06 20:37 IST

ಮಂಗಳೂರು, ನ. 6: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಈ ನಡುವೆ ಶುಕ್ರವಾರ 79 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, 223 ಮಂದಿಗೆ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿನ ಒಟ್ಟು 30,747 ಸೋಂಕಿತರ ಪೈಕಿ 28,934 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ಗೆ ಜಿಲ್ಲೆಯಲ್ಲಿ ಇದುವರೆಗೆ 686 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳು, ಮನೆಗಳಲ್ಲಿ 1,127 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ 11,278 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 12,34,742 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News