×
Ad

ಬೆಳೆ ಸಮೀಕ್ಷೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

Update: 2020-11-06 21:31 IST

ಉಡುಪಿ, ನ.6: ಜಿಲ್ಲೆಯಲ್ಲಿ ಜಿಪಿಎಸ್ ಆಧಾರಿತ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಖಾಸಗಿ ನಿವಾಸಿಗಳ ಮೂಲಕ ಕೈಗೊಳ್ಳಲಾಗಿದೆ. ಬೆಳೆ ಸಮೀಕ್ಷೆಯಲ್ಲಿ ನಮೂದಾದ ಬೆಳೆಗಳ ಬಗ್ಗೆ ರೈತರಿಗೆ ಆಕ್ಷೇಪಣೆ ಇದ್ದಲ್ಲಿ ಅದಕ್ಕೆ ಅವಕಾಶ ನೀಡಲಾಗಿದೆ.

ಇದಕ್ಕಾಗಿ ಬೆಳೆ ಸಮೀಕ್ಷೆ -www.cropsurvey.karnataka.gov.in- ವೆಬ್ ಪೋರ್ಟಲ್ ಅಥವಾ ಮೊಬೈಲ್ ಆ್ಯಪ್ ಬೆಳೆ ದರ್ಶಕ ಕರ್ನಾಟಕ- 2020-21ರ ಮೂಲಕ ಆಕ್ಷೇಪಣೆ ಸಲ್ಲಿಸಬಹುದು.

ರೈತರಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಸಂಬಂಧಿಸಿದ ಗ್ರಾಮದ ಮೇಲ್ವಿಚಾರಕರಿಂದ ಪರಿಶೀಲಿಸಿ, ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News