ಕಾರ್ಕಳ ಕ್ಷೇತ್ರ ಜೆಡಿಎಸ್ ಅಧ್ಯಕ್ಷರಾಗಿ ಶ್ರೀಕಾಂತ ಪೂಜಾರಿ
Update: 2020-11-06 21:34 IST
ಉಡುಪಿ, ನ.6: ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಜಾತ್ಯತೀತ ಜನತಾ ದಳದ ನೂತನ ಅಧ್ಯಕ್ಷರಾಗಿ ಹೆಬ್ರಿಯ ಶ್ರೀಕಾಂತ ಪೂಜಾರಿ ಕೆ. ಅವರನ್ನು ನೇಮಿಸಲಾಗಿದೆ.
ಕಾರ್ಕಳ ತಾಲೂಕಿನ ಮಾಜಿ ಕೆಡಿಪಿ ಸದಸ್ಯರಾಗಿದ್ದ ಶ್ರೀಕಾಂತ ಪೂಜಾರಿ, ಕಾರ್ಕಳ ಜೆಡಿಎಸ್‌ನ ಕಾರ್ಯಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅವರ ಶಿಫಾರಸ್ಸಿನ ಮೇರೆಗೆ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ಈ ನೇಮಕಾತಿ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.