ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಕೆ ನಿಷೇಧ ವಿಚಾರ : ಸಮಸ್ಯೆ ಬಗೆಹರಿಸಲು ಸಿಎಂಗೆ ರಹೀಂ ಉಚ್ಚಿಲ್ ಆಗ್ರಹ
Update: 2020-11-06 21:53 IST
ಮಂಗಳೂರು, ನ.6: ಮಸೀದಿಗಳಲ್ಲಿ ಧ್ವನಿವರ್ಧಕಗಳ ಅಳವಡಿಕೆಯ ನಿಷೇಧ ವಿಚಾರಕ್ಕೆ ಸಂಬಂಧಪಟ್ಟಂತೆ ಉದ್ಭವವಾಗಿರುವ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು ಎಂದು ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಆಗ್ರಹಿಸಿದ್ದಾರೆ.
ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯಕ್ಕೆ ತೊಂದರೆ ಆಗದಂತೆ ರಹೀಂ ಉಚ್ಚಿಲ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದಾರೆ.
ಮಸೀದಿಗಳಲ್ಲಿ ಅಝಾನ್, ದೇವಸ್ಥಾನಗಳಲ್ಲಿ ಸುಪ್ರಭಾತ, ಚರ್ಚ್‌ಗಳಲ್ಲಿ ಗಂಟೆ ಬಾರಿಸುವುದು ಇವೆಲ್ಲವನ್ನು ಧಾರ್ಮಿಕ ಹಿನ್ನೆಲೆಯಲ್ಲಿ ಮತ್ತು ಸೌಹಾರ್ದದ ನೆಲೆಯಲ್ಲಿ ಬಹುತೇಕ ಶೇ.90 ಭಾರತೀಯರು ಪರಸ್ಪರ ಅನ್ಯೋನ್ಯದಿಂದ ಸಹಿಸಿಕೊಂಡು ಬಂದಿದ್ದಾರೆ ಎಂದು ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.