ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ: ಇಬ್ಬರ ಬಂಧನ

Update: 2020-11-07 05:40 GMT

ಶಿವಮೊಗ್ಗ, ನ.7: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶುಕ್ರವಾರ ಇಬ್ಬರು ಆರೋಪಿಗಳನ್ನು ಬಂಧಿಸಿ 40 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ.

ಮುಹಮ್ಮದ್ ಮಸೂದ್(43) ಹಾಗೂ ಶೇಖರ್(26) ಬಂಧಿತರು.

 ಶಿವಮೊಗ್ಗ ನಗರದ ಮಲವಗೊಪ್ಪ ಬಸ್ ಸ್ಟಾಪ್ ನಲ್ಲಿ ಆರೋಪಿಗಳು  ಐಪಿಎಲ್‍ ಕ್ರಿಕೆಟ್‍ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್  ಇನ್ಸ್ ಪೆಕ್ಟರ್ ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡವು ಆರೋಪಿಗಳನ್ನು ವಶಕ್ಕೆ ಪಡೆದು, ಆರೋಪಿಗಳಿಂದ 40 ಸಾವಿರ ರೂ ನಗದು ಹಾಗೂ 2 ಮೊಬೈಲ್ ಪೋನ್‍ಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News