ಮೂಡುಬಿದಿರೆ ಪುರಸಭೆ ಬಿಜೆಪಿ ತೆಕ್ಕೆಗೆ
Update: 2020-11-07 14:13 IST
ಮೂಡುಬಿದಿರೆ, ನ.7: ಮೊದಲ ಬಾರಿಗೆ ಮೂಡುಬಿದಿರೆ ಪುರಸಭೆಯ ಆಡಳತ ಬಿಜೆಪಿ ತೆಕ್ಕೆಗೆ ಬಿದ್ದಿದ್ದು, ಅಧ್ಯಕ್ಷರಾಗಿ ಪ್ರಸಾದ್ ಮತ್ತು ಉಪಾಧ್ಯಕ್ಷೆಯಾಗಿ ಸುಜಾತಾ ಆಯ್ಕೆಯಾಗಿದ್ದಾರೆ.
ಮೂಡುಬಿದಿರೆ ಪುರಸಭೆ ಆರಂಭವಾದಾಗಿನಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ನ ಆಡಳಿತದಲ್ಲಿದ್ದ ಪುರಸಭೆ ಇದೀಗ ಮೊದಲ ಬಾರಿಗೆ ಬಿಜೆಪಿ ಪಾಲಾಗಿದೆ.
ಒಂದೂವರೆ ವರ್ಷಗಳ ಹಿಂದೆ ಮೂಡುಬಿದಿರೆಯ ಪುರಸಭೆಯ ಚುನಾವಣೆ ನಡೆದಿದ್ದು 23 ಸದಸ್ಯರು ಆಯ್ಕೆಯಾಗಿದ್ದರು. ಈ ಪೈಕಿ 12 ಸ್ಥಾನಗಳನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಿಸಿದ್ದರೆ, ಕಾಂಗ್ರೆಸ್ ಬೆಂಬಲಿತ 11 ಮಂದಿ ಆಯ್ಕೆಯಾಗಿದ್ದರು. ಕಾರಣಾಂತರಗಳಿಂದ ಅಧ್ಯಕ್ಷರು-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿರಲಿಲ್ಲ. ಇದೀಗ ಶನಿವಾರ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಬಿಜೆಪಿ ಗೆಲುವು ಸಾಧಿಸಿದೆ.