ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
Update: 2020-11-07 15:35 IST
ಬೆಂಗಳೂರು, ನ.7: ಪ್ರಸಕ್ತ ಸಾಲಿನ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಶನಿವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಜರುಗಿತು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ, ಶಾಸಕ ಉದಯ್ ಗರುಡಾಚಾರ್, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಉಪಸ್ಥಿತರಿದ್ದರು.