ಸಾಲು ಮರದ ತಿಮ್ಮಕ್ಕರಿಗೆ ಕರ್ನಾಟಕ ವಿವಿಯಿಂದ ಗೌರವ ಡಾಕ್ಟರೇಟ್
Update: 2020-11-07 16:49 IST
ಕಲಬುರಗಿ, ನ.7: ಸಾಲು ಮರದ ತಿಮ್ಮಕ್ಕ ಅವರಿಗೆ ಈ ಹಿಂದೆ ಗೌರವ ಡಾಕ್ಟರೇಟ್ ಘೋಷಿಸಿದ್ದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ(ಸಿಯುಕೆ) ಶನಿವಾರ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ.
ಸಾಲು ಮರದ ತಿಮ್ಮಕ್ಕ ಅವರ ನಿವಾಸಕ್ಕೆ ತೆರಳಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪದಾಧಿಕಾರಿಗಳು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿರುವ ಸಾಲು ಮರದ ತಿಮ್ಮಕ್ಕ ಅವರ ಮನೆಯಲ್ಲಿ, ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ಈ ಸರಳ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ. ಎಚ್.ಎಂ. ಮಹೇಶ್ವರಯ್ಯ, ಭಾಷಾ ವಿಜ್ಞಾನಿ ಪ್ರೊ. ರಾಜೇಶ್ವರಿ ಮಹೇಶ್ವರಯ್ಯ, ಮಾನವಿಕ ಮತ್ತು ಭಾಷಾ ನಿಕಾಯದ ಡೀನ್ ಪ್ರೊ. ಬಸವರಾಜ ಡೋಣೂರ, ಕನ್ನಡ ವಿಭಾಗದ ಮುಖ್ಯಸ್ಥ ವಿಕ್ರಮ ವಿಸಾಜಿ, ಕ್ಲಾಸಿಕಲ್ ಕನ್ನಡದ ನಿರ್ದೇಶಕ ಪ್ರೊ ಬಿ.ಬಿ. ಪೂಜಾರಿ, ಸಹಾಯಕ ಕುಲಸಚಿವ ಅಜೀಂ ಪಾಷಾ ಉಪಸ್ಥಿತರಿದ್ದರು.