ಕ್ರಿಕೆಟ್ ಬೆಟ್ಟಿಂಗ್ ಆರೋಪ: ಇಬ್ಬರ ಬಂಧನ

Update: 2020-11-07 11:26 GMT

ಬೆಂಗಳೂರು, ನ.7: ಐಪಿಎಲ್ ಕ್ರಿಕೆಟ್ ಪಂದ್ಯಗಳನ್ನು ಗುರಿಯಾಗಿಸಿಕೊಂಡು ಜೂಜಾಟ ನಡೆಸುತ್ತಿದ್ದ ಆರೋಪದಡಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅರುಣ್ ಜೈನ್ ಹಾಗೂ ನವೀನ್ ಎಂಬುವರು ಬಂಧಿತ ಆರೋಪಿಗಳೆಂದು ಪೊಲೀಸರು ಹೇಳಿದ್ದಾರೆ.

ಆರೋಪಿಗಳಿಬ್ಬರು ಆರ್‍ಸಿಬಿ ಮತ್ತು ಹೈದರಾಬಾದ್ ನಡುವಿನ ಪಂದ್ಯಕ್ಕೆ ಹಣವಿಟ್ಟು ಬೆಟ್ಟಿಂಗ್ ನಡೆಸುತ್ತಿದ್ದರು ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದ್ದು, ಇವರಿಂದ 10 ಲಕ್ಷ ರೂ. ನಗದು ಜಪ್ತಿ ಮಾಡಿ, ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News