×
Ad

ಕಾಂಗ್ರೆಸ್ ನಾಯಕರನ್ನು ಹಣಿಯಲು ಸಿಬಿಐ, ಈಡಿ ಬಳಸುತ್ತಿರುವ ಬಿಜೆಪಿ: ರಣದೀಪ್ ಸುರ್ಜೇವಾಲ

Update: 2020-11-07 18:10 IST

ಬೆಂಗಳೂರು, ನ.7: ಅಸ್ಥಿರ ಯಡಿಯೂರಪ್ಪ ಸರಕಾರವು ತನ್ನ ಮುಂಚೂಣಿ ಘಟಕಗಳಾದ ಸಿಬಿಐ ಮತ್ತು ಈಡಿ ಬಳಸಿಕೊಂಡು ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ವಿನಯ್ ಕುಲಕರ್ಣಿ ಸೇರಿದಂತೆ ಇನ್ನಿತರ ಕಾಂಗ್ರೆಸ್ ನಾಯಕರನ್ನು ಹಣಿಯಲು ಯತ್ನಿಸುತ್ತಿದೆ. ಈ ತಂತ್ರಗಳು ಜನರಿಗಾಗಿ ಹೋರಾಡುವ ನಮ್ಮ ಸಂಕಲ್ಪವನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ ಎಂಬುದನ್ನು ಬಿಜೆಪಿ ನೆನಪಿನಲ್ಲಿಡಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸರಕಾರವು ಸಿಬಿಐ ಅನ್ನು ತನ್ನ ಕೈಗೊಂಬೆಯಾಗಿ ಮಾಡಿಕೊಂಡು ಕಾಂಗ್ರೆಸ್ ನಾಯಕರಾದ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿರುವುದು ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿಯ ರಾಜಕೀಯ ಪಿತೂರಿಯನ್ನು ಎತ್ತಿ ತೋರಿಸುತ್ತದೆ. ಕಾಂಗ್ರೆಸ್ ನಾಯಕರು ಇಂತಹ ಬೆದರಿಕೆ ತಂತ್ರಗಳಿಗೆ ಎಂದಿಗೂ ಜಗ್ಗುವುದಿಲ್ಲ ಎಂಬುದನ್ನು ಯಡಿಯೂರಪ್ಪನವರು ಅರ್ಥಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News