×
Ad

ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ

Update: 2020-11-07 21:13 IST

ಬೆಂಗಳೂರು, ನ.7: ಕರ್ನಾಟಕ ಮಾಧ್ಯಮ ಅಕಾಡೆಮಿಯ 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿಯಲ್ಲಿ (ಎಸ್.ಸಿ.ಪಿ./ ಟಿ.ಎಸ್.ಪಿ) ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಾಗೂ ವಿದ್ಯುನ್ಮಾನ ಮಾಧ್ಯಮ ಸ್ನಾತಕೋತ್ತರ ಪದವೀಧರರಿಗೆ ವೃತ್ತಿಯಲ್ಲಿ ಉತ್ತಮ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮೂರು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಪರಿಶಿಷ್ಟ ಜಾತಿಯ 25 ಮಂದಿ ಹಾಗೂ ಪರಿಶಿಷ್ಟ ಪಂಗಡದ 10 ಮಂದಿ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರಿಕಾಲಯ/ವಾಹಿನಿಗಳಲ್ಲಿ ತರಬೇತಿ ನೀಡಿ ಮಾಹೆಯಾನ 15 ಸಾವಿರ ರೂ.ಗಳ ಸ್ಟೈಫಂಡ್ ನೀಡಲಾಗುವುದು.

ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ್ದು ಕನ್ನಡ ಭಾಷೆಯಲ್ಲಿ ಪರಿಣಿತರಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.

ಅರ್ಜಿಯೊಂದಿಗೆ ಎಸೆಸೆಲ್ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರಗಳೊಂದಿಗೆ ಜಾತಿ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರೆ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಇ-ಮೇಲ್ ವಿಳಾಸ traineekma2020@gmail.com ಮೂಲಕ ಅಥವಾ ಅಂಚೆ ಮೂಲಕ ನವೆಂಬರ್ 27 ರೊಳಗೆ ತಲುಪುವಂತೆ ಕಳುಹಿಸಬೇಕು.

ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಯಾವುದೇ ಸರಕಾರಿ ಇಲಾಖೆ/ಸಂಸ್ಥೆಗಳಲ್ಲಿ ಫಲಾನುಭವಿಗಳಾಗಿದ್ದರೆ ಅಂತಹವರು ಅರ್ಜಿ ಸಲ್ಲಿಸುವಂತಿಲ್ಲ. ಸರಕಾರದಿಂದ ಈಗಾಗಲೇ ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22860164 ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು-560001 ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧಿಕೃತ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News