ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರ ಬಂಧನ
Update: 2020-11-08 10:23 IST
ಶಿವಮೊಗ್ಗ, ನ.8: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಯ್ಯೂಬ್ ಖಾನ್ ಯಾನೆ ಅನ್ವರ್ ಖಾನ್( 21), ಸಲ್ಮಾನ್ ಯಾನೆ ನೇಪಾಳಿ ಸಲ್ಮಾನ್( 20) ಬಂಧಿತ ಆರೋಪಿಗಳು.
ಟಿಪ್ಪು ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯಂತೆ ತುಂಗಾ ನಗರ ಠಾಣೆ ಸಬ್ ಇನ್ಸ್ ಪೆಕ್ಟರ್ ತಿರುಮಲೇಶ್ ನೇತೃತ್ವದ ಸಿಬ್ಬಂದಿ ತಂಡ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ದಾಳಿ ವೇಳೆ ಅರೋಪಿಗಳಿಂದ ಮಾರಾಟಕ್ಕೆ ಬಳಸಿದ್ದ 100 ಗ್ರಾಂ ತೂಕದ ಗಾಂಜಾ ಹಾಗೂ ಮಾರಾಟಕ್ಕೆ ಬಳಸಿದ್ದ ಪಲ್ಸರ್ ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಎಎಸ್ಸೈ ನಾರಾಯಣ್, ಸಿಬ್ಬಂದಿಯಾದ ಅರುಣ್, ಗುರುನಾಯ್ಕ್, ಸಂತೋಷ್, ಸೈಯದ್ ಇಮ್ರಾನ್, ಲಂಕೇಶ್ ಭಾಗವಹಿಸಿದ್ದರು.