×
Ad

ಬಿಜೆಪಿಗೆ ರಾಷ್ಟ್ರಮಟ್ಟದಲ್ಲಿ ಪ್ರಬಲ ಸ್ಪರ್ಧೆ ನೀಡಬಲ್ಲ ಪಕ್ಷ ಕಾಂಗ್ರೆಸ್: ಸಸಿಕಾಂತ್ ಸೆಂಥಿಲ್

Update: 2020-11-08 12:31 IST

ಮಂಗಳೂರು, ನ.8: ಕಾಂಗ್ರೆಸ್ ಪಕ್ಷವು ಜನಪರ ಸಿದ್ಧಾಂತವನ್ನು ಹೊಂದಿದ್ದು, ಬಿಜೆಪಿಗೆ ರಾಷ್ಟ್ರಮಟ್ಟದಲ್ಲಿ ಪ್ರಬಲ ಪ್ರತಿಸ್ಪರ್ಧಿ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ ಎಂದು ಮಾಜಿ ಐಎಎಸ್ ಅಧಿಕಾರಿ, ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. 

ರಾಜಕೀಯ ಪ್ರವೇಶ ಕುರಿತಂತೆ ‘ವಾರ್ತಾಭಾರತಿ’ಯೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲು ಮೂರು ವಾರಗಳ ಹಿಂದೆ ನಿರ್ಧಾರ ತೆಗೆದುಕೊಂಡಿದ್ದೇನೆ. ಪಕ್ಷದಲ್ಲಿ ಯಾವುದೇ ಹುದ್ದೆ ಅಥವಾ ಸಂಸದ, ಶಾಸಕನಾಗಿ ಸ್ಪರ್ಧಿಸುವ ಉದ್ದೇಶದಿಂದ ಕಾಂಗ್ರೆಸ್‌ಗೆ ಸೇರುತ್ತಿಲ್ಲ. ಸಂಘಟನಾತ್ಮಕವಾಗಿ, ಕಾರ್ಯಕರ್ತನಾಗಿ ಕೆಲಸ ಮಾಡಲು ಬಯಸಿ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ.

ಎಐಡಿಎಂಕೆಯಂತಹ ಪಕ್ಷಗಳನ್ನೂ ತಾನೂ ಸೇರಬಹುದಿತ್ತು. ಆದ್ರೆ ಕಾಂಗ್ರೆಸ್ ಪಕ್ಷವು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ, ಜಾತ್ಯತೀತವಾಗಿ ಕೆಲಸ ಮಾಡುವಂತಹ ನಾಯಕತ್ವವನ್ನು ಹೊಂದಿದೆ. ಅಲ್ಲದೇ ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಪ್ರಬಲ ಸ್ಪರ್ಧೆಯನ್ನು ಒಡ್ಡಬಲ್ಲ ಪಕ್ಷ ಎಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬಂದಿದ್ದೇನೆ. ನ.9ರಂದು ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News