ಜಮ್ಮು-ಕಾಶ್ಮೀರ: ಓರ್ವ ಸೇನಾಧಿಕಾರಿ, ಮೂವರು ಯೋಧರು ಹುತಾತ್ಮ

Update: 2020-11-08 10:36 GMT

ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ)ಯುದ್ದಕ್ಕೂ ನಡೆದ ಉಗ್ರರ ವಿರುದ್ಧ ಪ್ರಮುಖ ಕಾರ್ಯಾಚರಣೆಯೊಂದರಲ್ಲಿ ಭಾರತೀಯ ಸೇನೆಯ ಅಧಿಕಾರಿ ಹಾಗೂ ಬಿಎಸ್‌ಎಫ್ ಕಾನ್‌ಸ್ಟೇಬಲ್ ಸಹಿತ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 ಉತ್ತರ ಕಾಶ್ಮೀರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ನಡೆದ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಎಪ್ರಿಲ್‌ನ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದಿರುವ ಅತ್ಯಂತ ದೊಡ್ಡ ಎನ್‌ಕೌಂಟರ್ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಲ್‌ಒಸಿ ಬಳಿ ಸೇನೆ ಹಾಗೂ ಬಿಎಸ್‌ಎಫ್ ಶಂಕಾಸ್ಪದ ಚಲನವಲನವನ್ನು ಗಮನಿಸಿದ ಬಳಿಕ ಎನ್‌ಕೌಂಟರ್ ಆರಂಭವಾಯಿತು. ಗುಂಡಿನ ಕಾಳಗದಲ್ಲಿ ಉಗ್ರರು ಹತರಾಗಿದ್ದು, ಈ ವೇಳೆ ಓರ್ವ ಬಿಎಸ್‌ಎಫ್ ಕಾನ್‌ಸ್ಟೇಬಲ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News