ಶಾಸಕಾಂಗ ಪಕ್ಷದ ನಾಯಕತ್ವ ಕುರಿತು ಹೇಳಿಕೆ ಬೇಡ: ಮುಖಂಡರಿಗೆ ಎಚ್ಚರಿಕೆ ನೀಡಿದ ಕೆಪಿಸಿಸಿ

Update: 2020-11-08 13:59 GMT

ಬೆಂಗಳೂರು, ನ. 8: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕತ್ವದ ಕುರಿತು ಯಾವುದೇ ರೀತಿಯ ಹೇಳಿಕೆಗಳನ್ನು ನೀಡುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ, ಪಕ್ಷದ ಎಲ್ಲ ಮುಖಂಡರಿಗೆ ಎಚ್ಚರಿಕೆ ನೀಡಿದೆ.

ರವಿವಾರ ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಮಿತಿ ಅಧ್ಯಕ್ಷ ಕೆ.ರೆಹ್ಮಾನ್ ಖಾನ್, ಶಾಸಕಾಂಗ ಪಕ್ಷದ ನಾಯಕತ್ವದ ಭವಿಷ್ಯದ ಕುರಿತು ಪಕ್ಷದ ನಾಯಕರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿರುವುದು ಬೆಳಕಿಗೆ ಬಂದಿದೆ. ಆದರೆ, ಈ ಅಭಿಪ್ರಾಯ ಸಮಯ ಬಂದಾಗ ಪರಿಗಣಿಸುವುದು ಸೂಕ್ತವಾಗಿದೆ. ಪಕ್ಷದ ಏಕತೆಯ ದೃಷ್ಟಿಯಿಂದ ಎಲ್ಲ ಚುನಾಯಿತ ಪ್ರತಿನಿಧಿಗಳು, ಪಕ್ಷದ ನಾಯಕರು, ಕಾರ್ಯಕರ್ತರು ಈ ಬಗೆಗಿನ ಹೇಳಿಕೆಗಳಿಂದ ದೂರ ಇದ್ದು, ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು. ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ರಾಜ್ಯದ ಹಿತದೃಷ್ಟಿಯಿಂದ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಸಲಹೆ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News