×
Ad

ಶರಾವತಿ ಮುಳುಗಡೆ ಸಂತ್ರಸ್ತರಿಗೆ ನ್ಯಾಯಯುತ ಪರಿಹಾರಕ್ಕೆ ಕ್ರಮ: ಯಡಿಯೂರಪ್ಪ

Update: 2020-11-08 19:42 IST

ಶಿವಮೊಗ್ಗ: ಹಲವು ವರ್ಷಗಳಿಂದ ನ್ಯಾಯಕ್ಕಾಗಿ ಕಾಯುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ತರಿಗೆ ನ್ಯಾಯಯುತವಾದ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಅವರು ರವಿವಾರ ಶಿವಮೊಗ್ಗ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದೆ. ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶರಾವತಿ ಸಂತ್ರಸ್ತರ ಸಮಸ್ಯೆ ಆದಷ್ಟು ಬೇಗನೇ ಪರಿಹರಿಸುವ ನಿಟ್ಟಿನಲ್ಲಿ ಶಾಸಕರೊಂದಿಗೆ ಸಹ ಸಭೆ ನಡೆಸಲಾಗಿದ್ದು, ಆದಷ್ಟು ಬೇಗನೆ ಸಮಸ್ಯೆಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ನಾನು ಚುನಾವಣೆ ಅದಾಗಲೇ ಎರಡು ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಿದ್ದೆ. ಚುನಾವಣೋತ್ತರ ಸಮೀಕ್ಷೇ ಸಹ ಈಗ ಅದನ್ನೇ ಹೇಳಿದೆ. ಕಾಂಗ್ರೆಸ್ ಹಾಗೂ ಬೇರೆ ಪಕ್ಷದವರು ಏನೇ ಟೀಕೆ-ಟಿಪ್ಪಣಿ ಮಾಡಿದರೂ ಜನ ನಮ್ಮ ಪರ ಇದ್ದಾರೆ. ಠೇವಣಿ ಸಿಗದ ಶಿರಾ ಕ್ಷೇತ್ರದಲ್ಲಿ 25 ಸಾವಿರ ಅಂತರದಲ್ಲಿ ಗೆಲುವು ಸಿಗಲಿದೆ. ಆರ್ ಆರ್ ನಗರ ಕ್ಷೇತ್ರದಲ್ಲಿ ಕೂಡ 40 ಸಾವಿರ ಅಂತರದಲ್ಲಿ ಗೆಲ್ಲುತ್ತೇವೆ. ಬಿಹಾರದಲ್ಲಿ ಸಹ ನಿತೀಶ್ ಕುಮಾರ್ ಅವರು ಹೆಚ್ಚು ಸ್ಥಾನ ಗೆಲ್ಲಲಿದ್ದಾರೆ ಎಂದರು.

ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಮತ್ತಿತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News