ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ

Update: 2020-11-08 14:14 GMT

ಬೆಂಗಳೂರು, ನ. 8: ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಕಾಮಾಕ್ಷಿಪಾಳ್ಯದ ಸುಮನಹಳ್ಳಿ ಸೇತುವೆ ಬಳಿ ನಡೆದಿದೆ.

ಬನಶಂಕರಿಯ ಮೊದಲ ಹಂತದ ಮಂಜುನಾಥ್ (30) ಕೊಲೆಯಾದ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.

ಯಾರಬ್ ನಗರದಲ್ಲಿ ಸಲೂನ್ ನಡೆಸುತ್ತಿದ್ದ ಶ್ರೀನಿವಾಸ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದು, ಮೃತದೇಹವನ್ನು ಸುಮನಹಳ್ಳಿ ಸೇತುವೆ ಬಳಿ ಎಸೆದು ಹೋಗಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎಂದು ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News