×
Ad

ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕಟ್ಟಡ ಕಾರ್ಮಿಕರ ಬೆಂಬಲ

Update: 2020-11-08 21:00 IST

ಬೈಂದೂರು, ನ.8: ಅಖಿಲ ಭಾರತ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಡಬ್ಯುಎಫ್‌ಐ)ಗೆ ಸಂಯೋಜಿಸಲ್ಪಟ್ಟ ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಸಭೆಯು ರವಿವಾರ ಬೈಂದೂರು ಸಿಐಟಿಯು ಕಚೇರಿಯಲ್ಲಿ ಜರಗಿತು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ್ ಮಾತ ನಾಡಿ, ಕಟ್ಟಡ ಕಾರ್ಮಿಕ ಮಂಡಳಿಗಳು ಹಾಗೂ ಕಾರ್ಮಿಕರ ಬದುಕನ್ನು ರಕ್ಷಿಸಲು ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮರಳು ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ನ.26ರಂದು ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರ ಅಖಿಲ ಭಾರತ ಸಾರ್ವಜನಿಕ ಮುಷ್ಕರ ಜರಗಲಿದ್ದು, ಇದನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಅಧ್ಯಕ್ಷತೆಯನ್ನು ರಾಜೀವ ಪಡುಕೋಣೆ ವಹಿಸಿದ್ದರು. ಕಾರ್ಮಿಕ ಮುಖಂಡ ರಾದ ಗಣೇಶ್ ತೊಂಡೆಮಕ್ಕಿ, ರೋನಾಲ್ಡ್ ರಾಜೇಶ್ ಕ್ವಾಡ್ರಸ್, ಉದಯ ಗಾಣಿಗ ಮೊಗೇರಿ, ವೆಂಕಟೇಶ್ ಕೋಣಿ, ಮಂಜು ಪಡುವರಿ, ಮಾಧವ ದೇವಾಡಿಗ ಉಪ್ಪುಂದ, ಶ್ರೀಧರ ದೇವಾಡಿಗ ಉಪ್ಪುಂದ, ವಿಜಯ ಕೋಯಾ ನಗರ, ಅಮ್ಮಯ್ಯ ಪೂಜಾರಿ ಬಿಜೂರು, ನಾಗರತ್ನ ನಾಡಾ, ರಾಮ ಕಂಬದ ಕೋಣೆ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News