ದ.ಕ. ಜಿಲ್ಲೆ : 78 ಮಂದಿಗೆ ಸೋಂಕು, ಕೋವಿಡ್‌ಗೆ ಮತ್ತೋರ್ವ ಬಲಿ
Update: 2020-11-08 21:10 IST
ಮಂಗಳೂರು, ನ.8: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ರವಿವಾರ ಹೊಸದಾಗಿ 78 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಈ ನಡುವೆ 98 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 30,897 ಸೋಂಕಿತರ ಪೈಕಿ 29,201 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ಇಲ್ಲಿಯವರೆಗೆ 688 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳು ಹಾಗೂ ಮನೆಗಳಲ್ಲಿ 1,009 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.