ಮಹಾರಾಷ್ಟ್ರದಲ್ಲಿ ಪಟಾಕಿ ನಿಷೇಧವಿಲ್ಲ: ಉದ್ಧವ್ ಠಾಕ್ರೆ

Update: 2020-11-08 16:49 GMT

ಮುಂಬೈ, ನ.8: ಕೊರೋನ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಪಟಾಕಿ ರಹಿತ ದೀಪಾವಳಿ ಆಚರಿಸಬೇಕೆಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜನತೆಗೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಪಟಾಕಿ ಮಾರಾಟಕ್ಕೆ ನಿಷೇಧವಿಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ.

 “ಕೊರೋನ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ನಾವು ಇದುವರೆಗೆ ಮಾಡಿದ್ದೆಲ್ಲವೂ ದೀಪಾವಳಿಯ 4 ದಿನದಲ್ಲಿ ಪಟಾಕಿ ಸಿಡಿಸುವುದರಿಂದ ಆಗುವ ವಾಯುಮಾಲಿನ್ಯದಿಂದಾಗಿ ವ್ಯರ್ಥವಾಗಲು ಅವಕಾಶ ಕೊಡಬೇಡಿ. ಜನತೆ ಸ್ವಯಂ ಕಟ್ಟುಪಾಡು ವಿಧಿಸಿಕೊಂಡರೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿಸುವುದನ್ನು ತಪ್ಪಿಸಿದರೆ ವಾಯುಮಾಲಿನ್ಯದ ಮೇಲೆ ನಿಯಂತ್ರಣ ಸಾಧಿಸಬಹುದು. ದೀಪಾವಳಿಯ ಬಳಿಕದ 15 ದಿನಗಳು ನಿರ್ಣಾಯಕವಾಗಲಿದೆ” ಎಂದು ಠಾಕ್ರೆ ಹೇಳಿದ್ದಾರೆ.

ದೇಶದಲ್ಲಿ ಕೊರೋನ ಸೋಂಕಿನ ಅತ್ಯಧಿಕ ಪ್ರಮಾಣ ದಾಖಲಾದ ರಾಜ್ಯಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಮಹಾರಾಷ್ಟ್ರದಲ್ಲಿ ಅಕ್ಟೋಬರ್ ಅಂತ್ಯದಿಂದ ಸೋಂಕಿನ ಪ್ರಮಾಣದಲ್ಲಿ ಗಮನಾರ್ಹ ಇಳಿಕೆಯಾಗುತ್ತಿದೆ ಎಂದು ವರದಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News