ಡಾನ್‍ಬಾಸ್ಕೋ ಕಾಲೇಜು ಬೆಂಗಳೂರು ವಿವಿಯೊಂದಿಗೆ ಸಂಯೋಜನೆಗೊಂಡಿಲ್ಲ: ಸ್ಪಷ್ಟನೆ

Update: 2020-11-08 18:10 GMT

ಬೆಂಗಳೂರು, ನ. 8: ಇಲ್ಲಿನ ಜಯನಗರದಲ್ಲಿರುವ ಡಾನ್ ಬಾಸ್ಕೋ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಕಾಲೇಜಿಗೆ ಬೆಂಗಳೂರು ವಿಶ್ವ ವಿದ್ಯಾಲಯದಿಂದ ಯಾವುದೇ ಸಂಯೋಜನೆಯನ್ನು ನೀಡಲಾಗಿರುವುದಿಲ್ಲವೆಂದು ಬೆಂಗಳೂರು ವಿಶ್ವ ವಿದ್ಯಾಲಯದ ಸ್ಪಷ್ಟ ಪಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವಿಶ್ವವಿದ್ಯಾಲಯವು, ಡಾನ್‍ಬಾಸ್ಕೋ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಕಾಲೇಜು ವಿದ್ಯಾರ್ಥಿಗಳ ಪ್ರವೇಶಾಕ್ಕಾಗಿ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ಇಂಟರ್‍ನೆಟ್‍ನಲ್ಲಿ ಉಪಯೋಗಿಸಿಕೊಳ್ಳುತ್ತಿರುವುದಾಗಿ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಂದ ಸ್ಪಷ್ಟನೆ ನೀಡಲಾಗುತ್ತಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News