ಚೆನ್ನೈನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಸಸಿಕಾಂತ್ ಸೆಂಥಿಲ್
Update: 2020-11-09 14:25 IST
ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಸೋಮವಾರ ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ತಮಿಳುನಾಡಿನ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೆಂಥಿಲ್ ಕಾಂಗ್ರೆಸ್ ಸೇರಿದ್ದಾರೆ.
ಇತ್ತೀಚೆಗಷ್ಟೇ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಇದೀಗ ಮತ್ತೋರ್ವ ಅಧಿಕಾರಿ ರಾಜಕೀಯ ಪ್ರವೇಶಿಸಿದ್ದಾರೆ.
2009ರ ಕರ್ನಾಟಕದ ಕೇಡರ್‌ನ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಕಳೆದ ವರ್ಷದ ಸೆಪ್ಟಂಬರ್ 6 ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
2021ರಲ್ಲಿ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.