ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ ಕುಲಕರ್ಣಿಗೆ 14 ದಿನಗಳ ನ್ಯಾಯಾಂಗ ಬಂಧನ

Update: 2020-11-09 17:54 GMT

ಧಾರವಾಡ: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ನ.23ರವರೆಗೆ ಧಾರವಾಡದ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ. 

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಗುರುವಾರ ಬಂಧಿಸಲಾಗಿತ್ತು. ಶುಕ್ರವಾರ ಸಿಬಿಐ ಮೂರು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಧಾರವಾಡದ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಬಳಿಕ ನ್ಯಾಯಪೀಠವು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ತೀರ್ಪುನ್ನು ಪ್ರಕಟಿಸಿತ್ತು. ಐಪಿಸಿ ಸೆಕ್ಷನ್ 302,143,147,148,120ಬಿ ಅಡಿ ಕೇಸ್ ದಾಖಲಾಗಿದೆ. 

ಪೊಲೀಸ್ ಬಂಧನ ಅವಧಿ ಸೋಮವಾರ ಕೊನೆಯಾಗಿದ್ದರಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಕಲಾಪಕ್ಕೆ ವಿನಯ ಅವರನ್ನು ಸಿಬಿಐ ಅಧಿಕಾರಿಗಳು ಹಾಜರುಪಡಿಸಿದ್ದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ವಿನಯ ಕುಲಕರ್ಣಿ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News