ಶಿವಮೊಗ್ಗ : ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ
Update: 2020-11-09 16:15 IST
ಶಿವಮೊಗ್ಗ : ನಗರದದಲ್ಲಿ ಹಾಡಹಗಲೇ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ನಗರದ ಬಸವನಗಡಿಯ 5 ನೇ ಕ್ರಾಸ್ ನಲ್ಲಿ ಯುವಕರ ಗುಂಪೊಂದು ರೌಡಿಶೀಟರ್ ಮಂಜುನಾಥ್ ಭಂಡಾರಿ (30) ಎಂಬಾತನನ್ನು ಹತ್ಯೆ ಮಾಡಿ ಪರಾರಿಯಾಗಿದೆ ಎಂದು ತಿಳಿದುಬಂದಿದೆ.
ಮಂಜುನಾಥ್ ಭಂಡಾರಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಬಂದ ಮೂವರ ತಂಡ ಹತ್ಯೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಳೆ ದ್ವೇಷವೆ ಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ.
ಎಸ್ ಪಿ ಕೆ.ಎಂ ಶಾಂತರಾಜು,ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಡಿವೈಎಸ್‌ಪಿ ಉಮೇಶ್ ಈಶ್ವರ ನಾಯ್ಕ್, ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.