ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ: ಆರೋಪಿಗಳಿಗೆ ಲುಕ್‍ಔಟ್ ನೋಟಿಸ್ ಜಾರಿ

Update: 2020-11-09 11:49 GMT

ಬೆಂಗಳೂರು, ನ.9: ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಸಿಸಿಬಿ ತನಿಖಾಧಿಕಾರಿಗಳು ಲುಕ್‍ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ.

ಡ್ರಗ್ಸ್ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ತಲೆ ಮರೆಸಿಕೊಂಡಿರುವ ಮೊದಲ ಆರೋಪಿ ಶಿವಪ್ರಕಾಶ್, ಆದಿತ್ಯ ಆಳ್ವಾ, ಅಭಿಷೇಕ್ ಸೇರಿದಂತೆ ನಾಲ್ವರ ವಿರುದ್ಧ ಲುಕ್‍ಔಟ್ ನೋಟಿಸ್ ಜಾರಿಗೊಳಿಸಿ ನಿಗಾವಹಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಲುಕ್ ಔಟ್ ನೋಟಿಸ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ಹಾರಾಟ ಮಾಡಲು ಸಾಧ್ಯವಿಲ್ಲ. ಅಲ್ಲದೆ, ಅವರ ಪತ್ತೆಗಾಗಿ ಈಗಾಗಲೇ ವಿಶೇಷ ತಂಡವೊಂದನ್ನು ರಚನೆ ಮಾಡಲಾಗಿದೆ  ಎಂದು ಸಿಸಿಬಿ ತನಿಖಾಧಿಕಾರಿಯೊಬ್ಬರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News