ದ.ಕ. ಜಿಲ್ಲೆ : 18 ಮಂದಿಗೆ ಕೊರೋನ ಸೋಂಕು
Update: 2020-11-09 20:55 IST
ಮಂಗಳೂರು, ನ.9: ದ.ಕ. ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ತೀರಾ ಇಳಿಕೆ ಕಂಡುಬಂದಿದೆ. 60ರ ಆಸುಪಾಸಿನಲ್ಲಿದ್ದ ಸೋಂಕಿತರ ಸಂಖ್ಯೆ ದಿಢೀರ್ 18ಕ್ಕೆ ಇಳಿಕೆಯಾಗಿದೆ. ಅಲ್ಲದೆ, ಪ್ರತಿದಿನವೂ ಒಂದಲ್ಲ ಒಂದು ಸಾವು ಪ್ರಕರಣ ದಾಖಲಾಗು ತ್ತಿತ್ತು. ಆದರೆ ಸೋಮವಾರ ಇದು ಶೂನ್ಯಕ್ಕೆ ತಲುಪಿದೆ.
ಜಿಲ್ಲೆಯಲ್ಲಿ ಸೋಮವಾರ 18 ಮಂದಿಗೆ ಸೋಂಕು ತಗುಲಿದ್ದು, 155 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿನ 30,915 ಸೋಂಕಿತರ ಪೈಕಿ 29,356 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ನಿಂದ ಜಿಲ್ಲೆಯಲ್ಲಿ 688 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ 871 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 11,689 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, ಇಲ್ಲಿಯವರೆಗೆ 12,81,242 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.