×
Ad

ಕಾನೂನು ವಿವಿ : ಕೋವಿಡ್ ಬಳಿಕವೇ ಇಂಟರ್‌ಮಿಡಿಯೆಟ್ ಸೆಮಿಸ್ಟರ್ ಪರೀಕ್ಷೆ

Update: 2020-11-09 21:04 IST

ಉಡುಪಿ, ನ.9: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಧೀನ ದಲ್ಲಿ ಬರುವ ಎಲ್ಲ ಕಾನೂನು ಮಹಾವಿದ್ಯಾಲಯಗಳಿಗೆ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಈಗಾಗಲೇ ಇಂಟರ್ ಮಿಡಿಯೇಟ್ ಸೆಮಿಸ್ಟರ್ ಪರೀಕ್ಷೆಗಳನ್ನು ಹೊರತು ಪಡಿಸಿ ಅಂತಿಮ ವರ್ಷದ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ಅಖಿಲ ಭಾರತ ವಕೀಲ ಮಂಡಳಿ ನಿರ್ಧರಿಸಿದೆ.

ಅದರ ಪ್ರಕಾರ ಎಲ್ಲ ಇಂಟರ್‌ಮಿಡಿಯೇಟ್ ಸೆಮಿಸ್ಟರ್ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ನಡೆಸದೆ ಮುಂದಿನ ವರ್ಷಕ್ಕೆ ಪ್ರವೇಶ ಕಲ್ಪಿಸಲಾಗಿದೆ. ಮಹಾವಿದ್ಯಾಲಯಗಳು ಪುನರಾರಂಭಗೊಂಡು ಕೋವಿಡ್-19ರ ಪರಿಸ್ಥಿತಿ ಸುಧಾರಿಸಿದ ನಂತರ ಈ ಪರೀಕ್ಷೆಗಳನ್ನು ನಡೆಸುವುದು ಅಖಿಲ ಭಾರತ ವಕೀಲ ಮಂಡಳಿಯ ನಿಯಮಾವಳಿಗಳಂತೆ ಕಡ್ಡಾಯವಾಗಿದೆ.

ಆದ್ದರಿಂದ ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗದೆ ಪರೀಕ್ಷೆಗಳ ತಯಾರಿ ಮಾಡಿಕೊಳ್ಳುವತ್ತ ತಮ್ಮ ಗಮನ ಹರಿಸಲು ಕರ್ನಾಟಕ ರಾಜ್ಯ ಕಾನೂನು ವಿಶ್ವದ್ಯಾಲಯದ ವೌಲ್ಯಮಾಪನ ಕುಲಸಚಿವ ಡಾ. ಜಿ.ಬಿ. ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News